ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ನೇತ್ರಾವತಿ ನದಿಯಲ್ಲಿ ಭಜರಂಗದಳದ ಮುಖಂಡನ ಮೃತದೇಹ ಪತ್ತೆ ಸ್ಥಳಕ್ಕೆ ಎಸ್ ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಜೀಪ ನಡುಗ್ರಾಮದ ನಿವಾಸಿ ರಾಜೇಶ್ ಪೂಜಾರಿ ಮೃತದೇಹ ಪಾಣೆಮಂಗಳೂರು ಹಳೆ ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಸಿಕ್ಕಿದೆ ಎಂದು ತಿಳಿದುಬಂದಿದೆ.


ರಾಜೇಶ್ ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ರಾಜೇಶ್ ಸಂಬಂಧಿ ಧೀರಜ್ ಅವರು ಮನೆಯವರಿಗೆ ಕರೆ ಮಾಡಿ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಸ್ಕೂಟರ್ ಇರುವುದನ್ನು ಹೇಳಿದ್ದಾರೆ. ಆ ಬಳಿಕ ಮನೆಯವರು ಹಾಗೂ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ ಎಂದು ತಿಳಿದುಬಂದಿದೆ. ಸಾವಿನ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದು, ಅಪಘಾತವೋ? ಆತ್ಮಹತ್ಯೆಯೋ? ಎಂಬ ಶಂಕೆ ಮೂಡಿದೆ ಎನ್ನಲಾಗಿದೆ.

Also Read  ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸ್ ದಾಳಿ - ಹಲವರು ವಶಕ್ಕೆ

 

error: Content is protected !!
Scroll to Top