(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ .
ಬಂಧಿತನನ್ನು ಮುಂಬೈ ಮೂಲದ ಮಹೇಶ್ ಭೂಪತ್ ಕುಮಾರ್ ಓಜಾ ಎಂದು ಗುರುತಿಸಲಾಗಿದೆ. ಬಂಧಿತನನ್ನು ಬೆಂಗಳೂರಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪಿಎಂಎಲ್‌ಎ ವಿಶೇಷ 10 ದಿನಗಳ ಇಡಿ ಕಸ್ಟಡಿಗೆ ನೀಡಿದೆ ಎನ್ನಲಾಗಿದೆ. ರಿಯಲ್ ಎಸ್ಟೇಟ್ ಯೋಜನೆಯ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕದಲ್ಲಿ ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಅಲ್ಲದೇ ಈ ಹಿಂದೆ ಮಹೇಶ್ ಭೂಪತ್ ಕುಮಾರ್ ಓಜಾರನ್ನು ಸಿಐಡಿ ಬಂಧಿಸಿತ್ತು ಎಂದು ತಿಳಿದುಬಂದಿದೆ. ವಿವಿಧ ಗುಂಪುಗಳು ಮತ್ತು ವ್ಯಕ್ತಿಗಳು ಕೈಗೊಂಡ ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.