(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಅವರ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿರುವುದನ್ನು ಸಕ್ಷಮ ಪ್ರಾಧಿಕಾರ ತನ್ನ ಆದೇಶದಲ್ಲಿ ದೃಢಪಡಿಸಿದೆ. ಆದಾಯ ತೆರಿಗೆ (ಐ-ಟಿ) ಇಲಾಖೆಯಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಕೇಂದ್ರೀಯ ಸಂಸ್ಥೆ ಪ್ರಕರಣದ ಆರಂಭಿಸಿತ್ತು. “ತನಿಖೆಯ ಸಂದರ್ಭದಲ್ಲಿ, ಹ್ಯಾರಿಸ್ ಅವರು ಯುಎಇಯಲ್ಲಿ ಫ್ಲಾಟ್‌ನ್ನು ಸ್ವಾಧೀನಪಡಿಸಿಕೊಂಡಿರುವುದು, ವಿದೇಶಿ ಬ್ಯಾಂಕ್ ಖಾತೆಗಳನ್ನು ಹೊಂದಿರುವುದು ಮತ್ತು ಯುಎಇಯಲ್ಲಿ ವಿದೇಶಿ ವ್ಯಾಪಾರ ಘಟಕದಲ್ಲಿ ಹೂಡಿಕೆ ಹೊಂದಿರುವುದು ಕಂಡು ಬಂದಿತ್ತು. ಅದರ ಒಟ್ಟು ಆಸ್ತಿ ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಆಗಿದೆ.