ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!!

(ನ್ಯೂಸ್ ಕಡಬ) newskadaba.com ತುಮಕೂರು, ಜ.13. ಯುವಕನೋರ್ವ ರೈಲಿನಲ್ಲಿ ಸಿಗರೇಟ್ ಸೇದಿ ಪುಂಡಾಟ ಮೆರೆದಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.

ಸಾರ್ವಜನಿಕರು ಯುವಕ ಬಳಿ ತೆರಳಿ , ಇದು ಸಾರ್ವಜನಿಕ ಸ್ಥಳ. ಇಲ್ಲಿ ಸಿಗರೇಟ್ ಸೇದಬಾರದು ಎಂದು ತಿಳಿ ಹೇಳಿದ್ದಾರೆ. ಆದರೆ ಈ ಯುವಕ ಮಾತ್ರ ಇದ್ಯಾವುದಕ್ಕೂ ಕ್ಯಾರೆ ಅನ್ನದೇ ಸಾರ್ವಜನಿಕರ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವಕ ಪ್ರಯಾಣಿಕರಿಗೆ ಆವಾಜ್ ಹಾಕಿ ಬೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಯುವಕನ ಪುಂಡಾಟದ ವಿಡಿಯೋ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕನ ಈ ಪುಂಡಾಟಕ್ಕೆ ಅನಾಹುತಗಳು ಸಂಭವಿಸಿದರೆ ಯಾರು ಹೊಣೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

error: Content is protected !!
Scroll to Top