ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

 

Scroll to Top