ಬಂಟ್ವಾಳ: ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ➤ ತಾಯಿ, ಮಗನಿಗೆ ಗಾಯ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 13.  ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮತ್ತು ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ ವರದಿಯಾಗಿದೆ.





ಗಾಯಗೊಂಡವರನ್ನು ಸರಪಾಡಿ ಗ್ರಾಮದ ವಚ್ಚಾರ್ ನಿವಾಸಿಯಾಗಿರುವ ರಾಜೀವ ಹಾಗೂ ಅವರ ಮಗ ಸಂತೋಷ್ ಅಂಚರ್ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.






error: Content is protected !!
Scroll to Top