ಮಂಗಳೂರು: ಮಾದಕ ವಸ್ತು ಗಾಂಜಾ ಸಾಗಾಟ.!!  ➤  ಆರೋಪಿ ಅರೆಸ್ಟ್         

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ವಿಜಯ್ ಕುಮಾರ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಈತ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಕುರಿತು ಲಭಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಸಹಿತ 10,200 ಕೆಜಿ ಗಾಂಜಾ ವಶಪಡಿಕೊಂಡಿದ್ದಾರೆ ಎನ್ನಲಾಗಿದೆ.

Also Read  'ಉಗ್ರ ಸಂಘಟನೆ ಲಷ್ಕರ್' ಪರ ಬರಹ ➤ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

 

error: Content is protected !!
Scroll to Top