ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ     ➤ ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.  ರಾಕ್ ಲೈನ್ ಸ್ಟುಡಿಯೋದಲ್ಲಿ ಬಘೀರ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ನಟನ ಕಾಲಿಗೆ ಪೆಟ್ಟಾಗಿದ್ದು ಶೀಘ್ರದಲ್ಲೇ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ.

ಶೂಟಿಂಗ್ ನಲ್ಲಿ ಗಾಯಗೊಂಡಿದ್ದ ಶ್ರೀಮುರಳಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ನಟನಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.

Also Read  ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

error: Content is protected !!
Scroll to Top