ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್..!                                                

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಬೆಂಗಳೂರಿನ ನಾಗವಾರದ ಹೆಣ್ಣೂರು ಕ್ರಾಸ್‌ ಬಳಿ ಮೆಟ್ರೊ ಪಿಲ್ಲರ್‌ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಈಚೆಗೆ ಕುಸಿದು ಬಿದ್ದು ತಾಯಿ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

Also Read  ನವೆಂಬರ್ 27ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

 

error: Content is protected !!
Scroll to Top