ಕಡಬ: ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಪತ್ತೆ..! ➤ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com  ಕಡಬ, ಜ.13. ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ದೇವಪ್ಪ ಗೌಡರ ಪುತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.

ಕಡಬ ಠಾಣೆಯಲ್ಲಿ ಈತನ ವಿರುದ್ದ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿ ತಿಳಿಸಿದೆ‌. ಪುತ್ತೂರು ವೃತ್ತ ನಿರೀಕ್ಷಕ ರವಿ ಬಿ.ಎಸ್ ಮತ್ತು ಕಡಬ ಠಾಣಾ ಎಸ್. ಐ ಆಂಜನೇಯ ರೆಡ್ಡಿ ನಿರ್ದೇಶನದಂತೆ ಕಡಬ ಠಾಣಾ ಎಚ್.ಸಿ ರಾಜು ನಾಯಕ್ ಮತ್ತು ಸಿರಾಜುದ್ದೀನ್ ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Also Read  ಸೆ. 11ರಿಂದ 13ರ ವರೆಗೆ ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ - ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆಯ ಹಿನ್ನೆಲೆ

 

error: Content is protected !!