ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ.14. ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತರನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ.  ಈತ ರೈಲ್ವೇ ಸೇತುವೆಯ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಮಣ್ಣು ಮೈಮೇಲೆ ಬಿದ್ದಿದೆ.

ಘಟನೆಯಲ್ಲಿ ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಅವರ ಮೇಲೂ ಮಣ್ಣು ಬಿದ್ದು ಗಾಯಗಳಾಗಿವೆ ಎನ್ನಲಾಗಿದೆ. ಗೋವಿಂದಪ್ಪ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿ ತಿಳಿಸಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ ಎನ್ನಲಾಗಿದೆ.

Also Read  ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪರಾರಿಯಾಗಿದ್ದ ನಾಲ್ವರ ಬಂಧನ

 

 

error: Content is protected !!
Scroll to Top