(ನ್ಯೂಸ್ ಕಡಬ) newskadaba.com ಮಂಗಳೂರು, ಜ.14. ನಗರದಾದ್ಯಂತ ರಾಜಾರೋಷವಾಗಿ ನಡೆಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಸೇರಿ ಇನ್ನಿತರ ಜೂಜು ಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಬೇಕೆಂದು ಒತ್ತಾಯಿಸಿ ಡಿವೈಎಫ್ಐ ಇದೀಗ ಹೋರಾಟ ಆರಂಭಿಸಿದೆ.
2 ದಿನಗಳ ಹಿಂದೆ ಇಂತಹ ಜೂಜುಕೇಂದ್ರಗಳ ಮುಂದೆ ಸಾಂಕೇತಿಕ ಮುತ್ತಿಗೆ ಹಾಕುವ ಮೂಲಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಗಮನಕ್ಕೆ ತಂದರೂ ಜೂಜುಕೇಂದ್ರಗಳ ವಿರುದ್ದ ಕ್ರಮಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ವಿಫಲಗೊಂಡಿದೆ. ಈಗ ಮತ್ತೆ ಜೂಜುಕೇಂದ್ರಗಳು ಎಂದಿನಂತೆ ಪ್ರಾರಂಭಗೊಂಡ ಹಿನ್ನಲೆಯಲ್ಲಿ ಜೂಜುಕೇಂದ್ರಗಳು ಶಾಶ್ವತವಾಗಿ ಮುಚ್ಚುವವರೆಗೆ ಹಲವು ಹಂತದ ಹೋರಾಟ ಸಂಘಟಿಸಲು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿಯು ತೀರ್ಮಾನಿಸಿದೆ.
ಕಾನೂನುಬಾಹಿರ ಚಟುವಟಿಕೆಯಾಗಿದ್ದು ನಗರದ ದುಡಿದು ತಿನ್ನುವ ಬೀದಿಬದಿ ವ್ಯಾಪಾರಿಗಳನ್ನು, ದಿನಕೂಲಿ ನೌಕರರನ್ನು, ರಿಕ್ಷಾ ಚಾಲಕ ಇನ್ನಿತರ ಸಣ್ಣ ಆದಾಯಕ್ಕೆ ದುಡಿಯುವ ಜನಸಾಮಾನ್ಯರನ್ನು ಮತ್ತು ವಿದ್ಯಾರ್ಥಿಗಳನ್ನು ಬಲಿಪಡೆಯುತ್ತಿದೆ.
*➤ ಡಿವೈಎಫ್ಐ ತೀರ್ಮಾನ*