ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ವಿ.ವಿ ಸ್ಥಾಪನೆ ➤ ಕೇಂದ್ರ ಗೃಹ ಸಚಿವಾಲಯ

(ನ್ಯೂಸ್ ಕಡಬ) newskadaba.com   ಹುಬ್ಬಳ್ಳಿ, ಜ.14. ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಎನ್ ಎಫ್ಎಸ್ ಯು ಗುಜರಾತ್ ಜೊತೆಗೆ ನಿರಂತರ ಮಾತುಕತೆ ಸಂಪರ್ಕದಲ್ಲಿತ್ತು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುಜರಾತ್ ಗೆ ಭೇಟಿ ನೀಡಿ ವಿಶ್ವವಿದ್ಯಾಲಯವನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಕಳೆದ ಮೇ ತಿಂಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಇದಕ್ಕೆ ಸಂಬಂಧಪಟ್ಟಂತೆ ಪತ್ರ ಬರೆದಿದ್ದರು. ಅದಕ್ಕೆ ಕೇಂದ್ರ ಗೃಹ ಸಚಿವಾಲಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಹುಬ್ಬಳ್ಳಿಯಲ್ಲಿ ಎನ್ ಎಫ್ಎಸ್ ಯು ಆವರಣ ಸ್ಥಾಪನೆಗೆ ಗೃಹ ಸಚಿವಾಲಯ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ.

Also Read  ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಇಲಾಖೆಯಿಂದ ➤ ವಿಕಲಚೇತನರ ಅಹವಾಲು ಸ್ವೀಕಾರ

 

error: Content is protected !!
Scroll to Top