(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 14 ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಸಂಕ್ರಾಂತಿ ಹಬ್ಬದ ದಿನವಾದ ಶನಿವಾರ ಅಡಿಕೆ ಧಾರಣೆ ಭಾರಿ ಕುಸಿತ ಕಂಡಿದೆ. ಕಳೆದ ಕೆಲವು ದಿನಗಳಿಂದ ಕುಸಿತವಾಗಿದ್ದ, ಅಡಿಕೆ ಧಾರಣೆ ಚೇತರಿಕೆ ಕಂಡಿತ್ತು, ಆದರೆ ಮತ್ತೆ ಇಂದು ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ.
ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.