ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಜ.14. ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (53) ಎಂಬವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ.

ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಬೆಂಗಳೂರಿನಿಂದ ಮಂಗಳೂರಿನತ್ತ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪಿಸುತ್ತಿದ್ದಂತೆಯೇ ಹೃದಯಾಘಾತಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ.

ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರಾದರೂ ಆಸ್ಪತ್ರೆಯಲ್ಲಿ ಅವರು ಮೃತ ಪಟ್ಟಿದ್ದಾರೆಂದು ಘೋಷಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ ನೀಡಿದ ದೂರಿನ ಅನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Scroll to Top