ನೋಂದಣಿ ರಹಿತ ಪೆಟ್‌ಶಾಪ್‌ಗಳಿಗೆ ಸಚಿವ ಚವ್ಹಾಣ್‌ ಎಚ್ಚರಿಕೆ..!    

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಸಾಕು ಪ್ರಾಣಿ ಮಾರಾಟಗಾರರು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳದೆ ಪೆಟ್‌ಶಾಪ್‌ ತೆರೆದಿದ್ದರೆ ಯಾವುದೇ ಮುನ್ಸೂಚನೆ ನೀಡದೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಬಹುತೇಕ ಅಂಗಡಿಗಳಲ್ಲಿ ಅನೇಕ ಪಕ್ಷಿಗಳನ್ನು ಒಂದೇ ಪಂಜರದಲ್ಲಿ ಇರಿಸಿರುವುದು, ಪಕ್ಷಿಗಳು ಮತ್ತು ಪ್ರಾಣಿಗಳು ಸ್ಥಳ ಹಾಗೂ ತಾಜಾ ಗಾಳಿಗಾಗಿ ಹೆಣಗಾಡುತ್ತಿರುವುದು, ನೀರು ಅಥವಾ ಆಹಾರ ಪೂರೈಕೆ ಇಲ್ಲದಿರುವುದು ಶುಚಿತ್ವ ಇಲ್ಲದಿರುವುದು, ಸಣ್ಣ ಮರಿಗಳನ್ನೇ ಮಾರಾಟ ಮಾಡುವುದು, ಆಹಾರ, ನೀರು ಇಲ್ಲದೆ ಪಕ್ಷಿಗಳು ಮತ್ತು ನಾಯಿಗಳು ಸತ್ತಿರುವುದು, ಕೊಳೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಏಕ ಕಾಲದಲ್ಲಿ ದಾಳಿ ನಡೆಸಿ, ರಕ್ಷಿಸಿದ ಎಲ್ಲಾ ಪ್ರಾಣಿಗಳನ್ನು ಕಾನೂನಿನ ಪ್ರಕಾರ ಮಾನ್ಯತೆ ಪಡೆದ ಸೌಲಭ್ಯಗಳಿರುವ ಪ್ರಾಣಿ ರಕ್ಷಣಾ ಗೃಹದಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

Also Read  ರಾಜ್ಯಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆ ➤ ಪ್ರಥಮ ಸ್ಥಾನ ಪಡೆದ ಕಡಬದ ಪೂಜಾ ಗೌಡ

 

 

error: Content is protected !!
Scroll to Top