ಇಂದು ಕಡಬದಲ್ಲಿ 17 ನೆ ಕನ್ನಡ ಸಾಹಿತ್ಯ ಸಮ್ಮೇಳನ ► ಭಾಗವಹಿಸುವ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಲಿರುವ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಪುತ್ತೂರು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒ.ಒ.ಡಿ ಸೌಲಭ್ಯವನ್ನು  ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಂಜೂರುಗೊಳಿಸಿದ್ದಾರೆ.

ಉಪನ್ಯಾಸಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಕ್ಷಕ - ಶಿಕ್ಷಕ ಸಂಘದ ಮಹಾಸಭೆ

error: Content is protected !!
Scroll to Top