(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.14. ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಾಗಲೇ ಬಜೆಟ್ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಏಪ್ರಿಲ್, ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಈ ಬಾರಿ ಸಿಎಂ ಮತದಾರರನ್ನು ಓಲೈಸಲು, ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ಎಂದು ತಿಳಿದುಬಂದಿದೆ.
Also Read ಉದನೆ ಪುತ್ಯ ಭಾಗದಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ ➤ 'ಆಪರೇಷನ್ ಎಲಿಫೆಂಟ್' ರೆಂಜಿಲಾಡಿಯಿಂದ ಉದನೆಗೆ ಶಿಫ್ಟ್