(ನ್ಯೂಸ್ ಕಡಬ) newskadaba.com ಮಂಗಳೂರು, ಜ.14. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರ ಡ್ರಗ್ಸ್, ಗಾಂಜಾ ಬೇಟೆ ಮುಂದುವರಿದಿದ್ದು 3 ದಿನದಲ್ಲಿಒಟ್ಟು 19 ಮಂದಿಯನ್ನು ಬಂಧಿಸಲಾಗಿದೆ. ಈ ಮೂಲಕ ನಗರದಾದ್ಯಂತ ಹರಡಿಸುವ ಬೃಹತ್ ಡ್ರಗ್ಸ್ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ.
ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರ್ಕಳ ಬಜಗೋಳಿ ನಿವಾಸಿ ಸುಕೇತ್ ಕಾವಾ ಅಲಿಯಾಸ್ ಚುಕ್ಕಿ (33), ಪುಲ್ಕೇರಿಯ ಸುನಿಲ್ (32) ಹಾಗೂ ತಮಿಳುನಾಡು ಕೊಯಮತ್ತೂರಿನ ಅರವಿಂದ ಕೆ. (24) ಪ್ರಕರಣದ ಆರೋಪಿಗಳು. ಆರೋಪಿಗಳಲ್ಲಿ ಸುಕೇತ್ ಕಾವಾ ಪ್ರವಾಸಿ ತಾಣವೊಂದರಲ್ಲಿ ಮಾರ್ಗದರ್ಶಕನಾಗಿ ಕೆಲಸ ಮಾಡುತ್ತಿದ್ದು, ಸುನಿಲ್ ಕಾರು ಚಾಲಕ ವೃತ್ತಿ, ಅರವಿಂದ್ ಕಾಸ್ಟೂಮ್ ಡಿಸೈನರ್ ಆಗಿದ್ದಾನೆ.
ಟ್ರಕ್ಕಿಂಗ್‌ಗೆ ಬಂದವರು, ಪ್ರವಾಸಿಗರು ಎಂದು ನಂಬಿಸಿ ಕಡಿಮೆ ಹಣಕ್ಕೆ ಪಡೆದು, ರೈಲಿನ ಮೂಲಕ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದರು. ಇದನ್ನು ಮಂಗಳೂರಿನ ವಿದ್ಯಾರ್ಥಿಗಳು, ಸಾವರ್ಜನಿಕರಿಗೆ ಪೂರೈಸಿ ಹಣ ಸಂಪಾದಿಸುತ್ತಿದ್ದರು. ಈ ಜಾಲದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೆನ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.