(ನ್ಯೂಸ್ ಕಡಬ) newskadaba.com ಕೊಪ್ಪಳ, ಜ.14. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪ್ರೇಮಿಗಳಿಬ್ಬರು ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಿಯುಸಿ ಓದುತ್ತಿರುವ 17ರ ಹರೆಯದ ಸುಮಾ ಮತ್ತು ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ ಪ್ರಕಾಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಕಳೆದ ಹಲವು ದಿನಗಳಿಂದ ಪ್ರೇಮಿಗಳು ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ಇತ್ತು. ಈ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡುಗಿ ಮನೆಯಲ್ಲಿಯೇ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.