➤ನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ, ಆಸಕ್ತರು ಈಗಲೇ ಅರ್ಜಿ ಹಾಕಿ

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 14. ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-II​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 25, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Also Read  ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು ಅಪಾಯದಿಂದ ಪಾರು….!

ಸಂಸ್ಥೆ ನಿಮ್ಹಾನ್ಸ್​

ಹುದ್ದೆ ಪ್ರಾಜೆಕ್ಟ್​ ಅಸೋಸಿಯೇಟ್-II

ಒಟ್ಟು ಹುದ್ದೆ 2

ವೇತನ  – ಮಾಸಿಕ ₹ 28,000-35,000

ಉದ್ಯೋಗದ ಸ್ಥಳ  –  ಬೆಂಗಳೂರು

ಅರ್ಜಿ ಸಲ್ಲಿಸಲು ಕೊನೆ ದಿನ ಜನವರಿ 25, 2023

ವಿದ್ಯಾರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಅಸೋಸಿಯೇಟ್-II​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್/ತಂತ್ರಜ್ಞಾನ/ವೈದ್ಯಶಾಸ್ತ್ರದಲ್ಲಿ ಪದವಿ, ನೈಸರ್ಗಿಕ/ಕೃಷಿ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನಗಳಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

error: Content is protected !!
Scroll to Top