ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ… – News Kadaba

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಹಾಗೂ ಎಫ್.ಟಿ.ಎಸ್.ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ಬಿಜೈ ಕಾಪಿಕಾಡು ನಿವಾಸಿ ಶೇಖರ ಆಲಿಯಾಸ್ ಜೆ.ಡಿ.ಚಂದ್ರ ಶೇಖರ್ ಶಿಕ್ಷೆಗೊಳಗಾದವನು ಎಂದು ತಿಳಿದುಬಂದಿದೆ.

ಈತ 2022 ರ ಜೂ.21ರಂದು ಬೆಳಗ್ಗೆ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕಿ ಶೀಕಲಾ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಅಪರಾಧಿಗೆ ಪೋಕ್ಸೋ ಕಾಯಿದೆಯ ಕಲಂ 8 ರಂತೆ 5 ವರ್ಷ ಸಾದಾ ಸಜೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆಯೂ ಅದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

 

 

Scroll to Top