ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..!

(ನ್ಯೂಸ್ ಕಡಬ)newskadaba.com ಕೋಲಾರ, ಜ.15. ಮಲಗಿದ ಸ್ಥಿತಿಯಲ್ಲೇ ಯುವ ಜೋಡಿಯ ಮೃತದೇಹ ಪತ್ತೆಯಾದ ಘಟನೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದೆ. ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಮೃತದೇಹ ಪತ್ತಯಾಗಿದೆ.

ಪ್ರೀತಿ ಮಾಡುವಂತೆ ಸುಮಾಗೆ ಪ್ರಕಾಶ ಭಜಂತ್ರಿ ಆಗ್ರಹಿಸಿದ್ದ. ಆದರೆ ಆಕೆಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮನೆಯಲ್ಲಿ ಒಪ್ಪದ ಹಿನ್ನೆಲೆ ಸುಮಾ ಪ್ರೀತಿಯನ್ನು ನಿರಾಕರಿಸಿದ್ದಳು. ಇದಕ್ಕೆ ಕೋಪಗೊಂಡ ಪ್ರಕಾಶ ಯಾರೂ ಇಲ್ಲದ ವೇಳೆ ಸುಮಾಳ ಮನೆಗೆ ಆಗಮಿಸಿ, ಆಕೆಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ತನಿಖೆಯಿಂದ ಬಯಲಾಗಬೇಕಿದೆ.

Also Read  ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ

 

error: Content is protected !!
Scroll to Top