ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……

crime, arrest, suspected


(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.







ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ ಹೂಡಿದ್ದ ಫ್ಲಾಟ್ ವೊಂದರ ಮೇಲೆ ದಾಳಿ ನಡೆಸಿ ಮಾದಕ ವಸ್ತುಗಳನ್ನು ಹೊಂದಿ ದರೋಡೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ವ್ಯಕ್ತಿಗಳನ್ನು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ವಶದಲ್ಲಿದ್ದ ಒಟ್ಟು 50,550 ರೂ. ಮೌಲ್ಯದ 5.0 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು, 110 ಗ್ರಾಂ ಗಾಂಜಾ, ದರೋಡೆಗೆ ಹೊಂದಿದ್ದ ಮಾರಕಾಯುಧಗಳನ್ನು ಹಾಗೂ 5 ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.






 

error: Content is protected !!
Scroll to Top