ಕಾರ್ಯಕರ್ತನೋರ್ವನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ..!!

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.15. ಕಾರ್ಯಕರ್ತನೊಬ್ಬನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ(17) ಮೃತ ಬಾಲಕಿ.

ಕಾರ್ಯಕರ್ತ ಹಿತೇಶ್ (25) ಅಪ್ರಾಪ್ತ ಬಾಲಕಿ ದೀಪ್ತಿಯನ್ನ ಪ್ರೀತಿಸಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ನೊಂದ ದೀಪ್ತಿ ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿ ಆಹ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ದೀಪ್ತಿ ಮೃತಪಟ್ಟಿದ್ದಾಳೆ. ಸಾಯುವ ಮುನ್ನ ದೀಪ್ತಿ ಡೆತ್ ನೋಟ್ ಬರೆದಿಟ್ಟಿದ್ದಳು ಎಂದು ತಿಳಿದುಬಂದಿದೆ.

 

Scroll to Top