(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.15. ಮದ್ಯ ಖರೀದಿ ಮತ್ತು ಮಾರಾಟಕ್ಕೆ ನಿಗದಿಪಡಿಸಿದ್ದ 21 ವರ್ಷಗಳ ವಯೋಮಿತಿಯನ್ನು ಸಡಿಲಿಸಿ 18 ವರ್ಷಕ್ಕೆ ಇಳಿಕೆ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅಬಕಾರಿ ಪರವಾನಗಿಗಳ (ಸಾಮಾನ್ಯ ಷರತ್ತು) ನಿಯಮಗಳು-1967’ ಕ್ಕೆ ತಿದ್ದುಪಡಿ ತರಲು ಅಬಕಾರಿ ಇಲಾಖೆಯು ಕರಡು ಪ್ರಸ್ತಾವನೆಯನ್ನು ಪ್ರಕಟಿಸಿದೆ.
ಆದರೆ ಈ ಪ್ರಸ್ತಾವಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಯುವಜನತೆ ಧೂಮಪಾನ, ಮದ್ಯಪಾನ ಮತ್ತಿತರ ದುಶ್ಚಟಗಳಿಗೆ ದಾಸರಾಗುತ್ತಿದ್ದು, ವಯಸ್ಸು ಇಳಿಕೆ ಮಾಡಿದರೆ ಇನ್ನೂ ಹೆಚ್ಚಿನ ಯುವಕರು ಮದ್ಯ ವ್ಯಸನಿಗಳಾಗುವ ಸಾಧ್ಯತೆ ಇದೆ ಎಂಬ ಆಕ್ರೋಶ ವ್ಯಕ್ತವಾಗಿದೆ.