ಮಂಗಳೂರು: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ…!! ➤ ಗಾಯಾಳುವಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.16. ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸುವ ಮೂಲಕ ಶಾಸಕ ಖಾದರ್ ಮಾನವೀಯತೆ ಮೆರೆದಿದ್ದಾರೆ.


ಸಂಜೆ ವೇಳೆ ಅಪಘಾತ ಸಂಭವಿಸಿದ್ದು, ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಅದೇ ರಸ್ತೆ ಮೂಲಕ ಸಂಚರಿಸುತ್ತಿದ್ದರು. ತಕ್ಷಣ ಗಾಯಾಳುವನ್ನು ತನ್ನ ಕಾರಿನಲ್ಲೇ ಆಸ್ಪತ್ರೆಗೆ ರವಾನಿಸುವ ಮೂಲಕ ಖಾದರ್ ಮಾನವೀಯತೆ ಮೆರೆಯುವ ಜೊತೆಗೆ ತಮ್ಮ ಜನಪ್ರತಿನಿಧಿಯ ಜವಾಬ್ದಾರಿ ನಿಭಾಯಿಸಿದ್ದಾರೆ ಎನ್ನಲಾಗಿದೆ.

Also Read  ಕರಾವಳಿ ಪ್ರದೇಶದಲ್ಲಿಈದುಲ್ ಫಿತ್ರ ಹಬ್ಬದ ಸಂರ್ಭಮಾಚರಣೆ

 

error: Content is protected !!
Scroll to Top