2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಇತ್ತೀಚೆಗಷ್ಟೇ ನಡೆದ ಗುಜರಾತ್ ಚುನಾವಣೆಯ ಫಲಿತಾಂಶವು 2024ರಲ್ಲಿಯೂ ನರೇಂದ್ರ ಮೋದಿ ಪ್ರಧಾನಿಯಾಗಿ ಮರು ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ದೇಶಾದ್ಯಂತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಗುಜರಾತ್ ಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಈ ಚುನಾವಣೆಯು ಪ್ರಾಮುಖ್ಯತೆ ಪಡೆದಿತ್ತು. 2024ರ ಲೋಕಸಬಾ ಚುನಾವಣೆಯಲ್ಲಿ ಮೋದಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಇಡೀ ದೇಶವೇ ಸಜ್ಜಾಗಿದೆ ಎಂದು ಹೇಳಿದ್ದಾರೆ. ಅಭಿವೃದ್ಧಿಗಳ ಬಗ್ಗೆ ಹೆಚ್ಚು ವಿವರಿಸುವ ಅಗತ್ಯವಿಲ್ಲ. ಚುನಾವಣೆಯಲ್ಲಿ ಜನರೇ ತೀರ್ಪು ನೀಡಿದ್ದಾರೆ ಎಂದು ಹೇಳಿದ್ದಾರೆ.

Also Read  ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಷ್ ಮನೆಗೆ ಭೇಟಿ, ಸನ್ಮಾನ

 

error: Content is protected !!
Scroll to Top