ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಮನೆಗೆ ಹೋಗುವಂತೆ ಹೇಳಿದ್ದಕ್ಕೆ ಸಿಟ್ಟಾಗಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಸಂಬಂಧಿಕರಿಗೆ ಚಾಕುವಿನಿಂದ ಇರಿದ ಪರಿಣಾಮ ಒಬ್ಬ ಮೃತಪಟ್ಟು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪೀಣ್ಯ ಎರಡನೇ ಹಂತದ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಕೇಶವಮೂರ್ತಿ(32) ಕೊಲೆಯಾದ ವ್ಯಕ್ತಿ. ಈತನ ಬಾವ ಮೈದುನ ಕಲ್ಲೇಶ್‌ (27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಭರತ್‌(28)ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಭರತ್‌ ಹಾಗೂ ಪತ್ನಿ ರಾಧಾ ನಡುವೆ ಆಗಾಗ ಜಗಳವಾಗುತ್ತಿತ್ತು. ಕೆಲವು ದಿನಗಳ ಹಿಂದೆ ಪತ್ನಿ ಜೊತೆ ಜಗಳ ಮಾಡಿಕೊಂಡು ಭರತ್‌ ಮನೆಗೆ ಹೋಗಿರಲಿಲ್ಲ. ಹೀಗಾಗಿ ಪತ್ನಿ ರಾಧಾ ಅತ್ತೆಯ ಮಗನಾದ ಕೇಶವಮೂರ್ತಿಗೆ ಕರೆ ಮಾಡಿ, ಗಂಡ ಮೂರು ದಿನಗಳಿಂದ ಮನೆಗೆ ಬಂದಿಲ್ಲ. ಎಲ್ಲಾದರೂ ಸಿಕ್ಕರೆ ಬುದ್ಧಿ ಹೇಳಿ ಮನೆಗೆ ಕಳುಹಿಸು ಎಂದು ಹೇಳಿದ್ದಾಳೆ ಎಂದು ವರದಿ ತಿಳಿಸಿದೆ.

Also Read  ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

 

error: Content is protected !!
Scroll to Top