ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 16. ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.


ಮೃತ ಯುವಕನನ್ನು ಬೆಳ್ತಂಗಡಿ ಮೂಲದ ವಿಜಿತ್ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Also Read  ಹಜ್ ಗೆ ನಿರ್ಬಂಧಿಸಿದ್ದ ಎಲ್ಲಾ ನಿಯಮಗಳಿಗೆ ಸಡಿಲಿಕೆ.!

error: Content is protected !!
Scroll to Top