ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com  ಹರಿಯಾಣ, ಜ.16. ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ತುರ್ತು ಪ್ರತಿಕ್ರಿಯೆ ವಾಹನವೊಂದು ಬಾಲಕಿಗೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಗುರುಗ್ರಾಮ್-ಫರಿದಾಬಾದ್ ರಸ್ತೆಯಲ್ಲಿ ಸಂಭವಿಸಿದೆ.

ಆರು ವರ್ಷದ ಬಾಲಕಿ ಘಟನೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಗ್ವಾಲ್ ಪಹಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಾನ್‌ನಲ್ಲಿದ್ದ ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ವ್ಯಾನ್ ಚಾಲಕ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಎಸಿಪಿ ತಿಳಿಸಿರುವುದಾಗಿ ವರದಿಯಾಗಿದೆ.

 

 

Scroll to Top