ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ನನ್ನ ಗ್ರಹಚಾರವೊ, ಏನೋ, ಕುಕ್ಕರ್‌ ಬಾಂಬ್‌ ಸ್ಫೋಟವನ್ನು ನನ್ನ ಜೀವನದಲ್ಲಿ ನಾನೆಂದೂ ನೋಡಿಲ್ಲ. ನನ್ನ ಪರಿಸ್ಥಿತಿ ಬೇರೆ ಯಾರಿಗೂ ಬರಬಾರದು. ಘಟನೆ ಬಳಿಕ ಸರ್ಕಾರದಿಂದ ನನ್ನ ಕುಟುಂಬಕ್ಕೆ ಪರಿಹಾರ ತೆಗೆಸಿಕೊಡುವುದಾಗಿ ಜನಪ್ರತಿನಿಧಿಗಳು, ಸಚಿವರು ಭರವಸೆ ನೀಡಿ ಹೋಗಿದ್ದಾರೆ.  ಹೊಸ ರಿಕ್ಷಾ ತೆಗೆಸಿಕೊಡುವುದಾಗಿಯೂ ಹೇಳಿದ್ದಾರೆ.

ಆದರೆ, ಇದುವರೆಗೂ ಯಾವ ಪರಿಹಾರವೂ ಸಿಕ್ಕಿಲ್ಲ. ತುಂಬ ಕಷ್ಟದಿಂದ ಬದುಕು ಸಾಗಿಸುತ್ತಿದ್ದೇವೆ ಇದು ಮಂಗಳೂರಿನ ನಾಗುರಿಯಲ್ಲಿ  ಚಲಿಸುತ್ತಿದ್ದ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದ ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿ (61) ಅವರ ಮನದಾಳದ ನೋವುಗಳಿವು ಎಂದು ವರದಿ ತಿಳಿಸಿದೆ.

Also Read  ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್

 

 

error: Content is protected !!
Scroll to Top