ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ಕಳೆದವಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಇದೀಗ ಆರೋಪಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಕಾನ್ಸ್​ಟೆಬಲ್​ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾಬಾ ದೃಢಪಡಿಸಿದ್ದಾರೆ.

‘ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ’ ಎಂದು ಬಾಬಾ ಹೇಳಿದ್ದಾರೆ.

Also Read  ಸುಳ್ಯ: ಜ್ಯುವೆಲ್ಲರಿ ಮಾರ್ಟ್ ಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ ಹಾಗೂ ನಗದು ಜೊತೆ ಸಿಸಿ ಕ್ಯಾಮರಾ ಹೊತ್ತೊಯ್ದರು

 

error: Content is protected !!
Scroll to Top