(ನ್ಯೂಸ್ ಕಡಬ) newskadaba.com ಮಂಜೇಶ್ವರ, ಡಿ.16. ಕ್ರಿಕೆಟ್ ಆಟವಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ಶನಿವಾರದಂದು ನಡೆದಿದೆ.
ಮೃತನನ್ನು ಉಪ್ಪಳ ಸಮೀಪದ ಜೋಡುಕಲ್ಲು ಕಯ್ಯಾರ ನಿವಾಸಿ ನಾರಾಯಣ ಎಂಬವರ ಪುತ್ರ ಪದ್ಮನಾಭ ಎಂದು ಗುರುತಿಸಲಾಗಿದೆ. ಪದ್ಮನಾಭ ಸ್ಥಳೀಯ ಮೀಯಪದವು ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾಟದ ಓವರಿನ ಕೊನೆಯ ಒಂದು ಎಸೆತದ ವೇಳೆ ಪದ್ಮನಾಭ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಜೊತೆಯಲ್ಲಿದ್ದ ಆಟಗಾರರು ಈತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯುವಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಹೃದಯಾಘಾತದಿಂದಾಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.