(ನ್ಯೂಸ್ ಕಡಬ) newskadaba.com, ಕಠ್ಮಂಡು, ಜ. 16 . ನೇಪಾಳದ ಪ್ರಯಾಣಿಕ ವಿಮಾನವೊಂದು ಭಾನುವಾರ ಪೋಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು, 68 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ತಿಳಿದು ಬಂದಿದೆ.
ನೇಪಾಳ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಯೇತಿ ಏರ್‌ಲೈನ್ಸ್‌ನ ವಿಮಾನ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 10:33 ಕ್ಕೆ ಟೇಕ್ ಆಫ್ ಆಗಿತ್ತು. ನಂತರದಲ್ಲಿ ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ನದಿಯ ದಡದಲ್ಲಿ ವಿಮಾನ ಪತನಗೊಂಡಿದೆ. ಒಟ್ಟು 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಗಳಿದ್ದರು ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಪ್ರಯಾಣಿಕರಲ್ಲಿ 10 ವಿದೇಶಿಗರು ಸೇರಿದ್ದಾರೆ ಎಂದು ನೇಪಾಳದ ಸರ್ಕಾರಿ ಟೆಲಿವಿಷನ್ ವರದಿ ಮಾಡಿದೆ. ವಿಮಾನ ಪತನಕ್ಕೀಡಾದ ಸ್ಥಳದಿಂದ ಕನಿಷ್ಠ 68 ಮೃತದೇಹಗಳನ್ನು ಹೊರತೆಗೆಯಲಾಗಿದೆ. ವಿಮಾನದಲ್ಲಿದ್ದ ಒಟ್ಟು 15 ವಿದೇಶಿ ಪ್ರಜೆಗಳಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.