ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 16 . ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿ ವಹಿಸಿಕೊಂಡಿದೆ.
ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್ರಿಂದ ಮಾಹಿತಿ ಸಂಗ್ರಹಿಸಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್ರಿಂದ ಮಾಹಿತಿ ಪಡೆದರು. ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಸೋಮವಾರ ಬೆಳಿಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.