ಮಂಗಳೂರು: ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ ಸಂಪನ್ನ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಡೇ- ನಲ್ಮ್, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟೀಯ ನಗರ ಜೀವನೋಪಾಯ ಅಭಿಯಾನದಡಿ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರವನ್ನು ನಗರದ ಉರ್ವಾ ಮಾರ್ಕೆಟ್‍ನ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಮಹಾನಗರ ಪಾಲಿಕೆಯ ಸಾಮಾಜಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲಿಯಾನ್ ಕಾರ್ಯಕ್ರಮ  ಉದ್ಘಾಟಿಸಿ, ಸ್ವಸಹಾಯ ಗುಂಪಿನ ಸದಸ್ಯರು ತರಬೇತಿಯ ಪ್ರಯೋಜ ಪಡೆದು ಜೀವನದಲ್ಲಿ ಯಶಸ್ವಿಯಾಗುವಂತೆ ಚಾಲನೆ ನೀಡಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಸ್.ಜೆ. ಹೇಮಚಂದ್ರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದು ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕೆಂದರು ಎನ್ನಲಾಗಿದೆ. ಮಹಾನಗರ ಪಾಲಿಕೆಯ ಸ್ಥಳೀಯ ಜನಪ್ರತಿನಿಧಿ ಗಣೇಶ್ ಕುಲಾಲ್, ಡೇ ನಲ್ಮ್ ವ್ಯವಸ್ಥಾಪಕರಾದ ಚಿತ್ತರಂಜನ್ ದಾಸ್, ಪ್ರದೇಶ ಮಟ್ಟದ ಒಕ್ಕೂಟದ ಅಧ್ಯಕ್ಷರಾದ ಲೀನಾ ಪಿಂಟೋ ಮತ್ತು ಸುಗುಣ ಉಪಸ್ಥಿತರಿದ್ದರು. ಸಮುದಾಯ ವ್ಯವಹಾರಗಳ ಅಧಿಕಾರಿ ಮಾಲಿನಿ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ಪ್ರದೇಶ ಮಟ್ಟದ ಒಕ್ಕೂಟದ ಒಟ್ಟು 60 ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವರದಿ ತಿಳಿಸಿದೆ .

Also Read  ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ.!!

 

error: Content is protected !!
Scroll to Top