ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಕಾಫು, ಜ.17. ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ.

ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಲಾರಿ ಗೂಡಂಗಡಿಗೆ ನುಗ್ಗಿದೆ ಎನ್ನಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಕೂಡಾ ಭೇಟಿ ನೀಡಿದ್ದು, ಅಂಗಡಿ‌ ಮಾಲಕರಿಗೆ ಸಾಂತ್ವನ ಹೇಳಿದ್ದಾರೆ.

Also Read  ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ.!➤ನಳಿನ್ ಕುಮಾರ್ ಕಟೀಲ್ 

 

 

error: Content is protected !!
Scroll to Top