ಎಂಡೋಸಲ್ಫಾನ್ ಸಂತ್ರಸ್ತರಿಗೆ ಜ.17ರಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ.


ಜ.17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಜ.18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಜ.21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ನಡೆಯಲಿದ್ದು, ಸಂತ್ರಸ್ತರು ಈ ಶಿಬಿರದ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಖಾಸಗಿ ಬಸ್ ಅಪಘಾತ ➤ಯುವತಿಗೆ ಗಂಭೀರ ಗಾಯ

 

error: Content is protected !!
Scroll to Top