ನಂಜನಗೂಡಿಗೆ ಜ.29 ರಂದು ಸಿ.ಎಂ ಭೇಟಿ

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣಾ ಸಮಾರಂಭದ ಉದ್ಘಾಟನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದರು.


ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ವರುಣಾ, ಟಿ.ನರಸೀಪುರ ನಂಜನಗೂಡು ಹಾಗೂ ಹೆಚ್.ಡಿ.ಕೋಟೆ ವ್ಯಾಪ್ತಿಯ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುವುದು. ಈಗಾಗಲೇ ಇದೇ ರೀತಿಯ ಒಂದು ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಯಶಸ್ವಿಯಾಗಿ ನಿರ್ವಹಿಸಿ 1693 ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗಿದೆ ಎಂದರು.

Also Read  ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ

 

error: Content is protected !!
Scroll to Top