(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.17. ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ.
1781 ಪ್ರಕರಣಗಳನ್ನು ಜಾಗೃತ ದಳ ದಾಖಲಿಸಿಕೊಂಡು ಅದರಲ್ಲಿ 1,721 ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.
ಅದೇ ರೀತಿ ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಬೆಸ್ಕಾಂ ಕ್ರಮಗೊಂಡಿದ್ದು, ಕಳೆದ 3 ತಿಂಗಳಲ್ಲಿ ಬಾಕಿ ಇದ್ದ 1,417.45 ಕೋಟಿ ರೂ. ನಲ್ಲಿ 358.3 ಕೋಟಿ ರೂ. ಬಿಲ್ ಮೊತ್ತವನ್ನು ಸಂಗ್ರಹಿಸಿದೆ. ಬಿಲ್ ಪಾವತಿಸದ ಸುಮಾರು 23 ಲಕ್ಷ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.