ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು ? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ.

ಮಹಾರಾಷ್ಟ್ರ ಪೊಲೀಸ್ ತಂಡ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು, ಮರುದಿನ ಮತ್ತೊಂದು ತಂಡ ತೆರಳಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. “ಅವರು ಜೈಲಿನ ಆವರಣವನ್ನು ಹುಡುಕಿದರು ಆದರೆ ಫೋನ್ ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಜೈಲಿನಲ್ಲಿ ಇದ್ದುಕೊಂಡೇ ಕರೆ ಮಾಡಿದ್ದ ಕೈದಿ, ತಾನು ಭೂಗತಪಾತಕಿ ದಾವೂದ್‌ ಇಬ್ರಾಹಿಂ ತಂಡದ ಸದಸ್ಯ, 100 ಕೋಟಿ ರೂ. ನೀಡುವಂತೆ ಬೆದರಿಕೆ ಒಡ್ಡಿದ್ದ. ಪೊಲೀಸ್ ತಂಡಗಳು ಜೀವಾವಧಿ ಅಪರಾಧಿ ಜಯೇಶ್ ಪೂಜಾರಿಯನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಪೂಜಾರಿ ತಾನು ಬೆದರಿಕೆ ಕರೆ ಮಾಡಿರುವುದನ್ನು ನಿರಾಕರಿಸಿದ್ದಾನೆ ಎಂದು ವರದಿಯಾಗಿದೆ. ಆದರೆ ಅದನ್ನು ಮಾಡಿದ್ದು ಅವರೇ ಎಂದು ಖಚಿತಪಡಿಸುವ ಲಿಂಕ್‌ಗಳಿವೆ ಎಂದು ಮೂಲಗಳು ತಿಳಿಸಿವೆ.

Also Read  ಮಾಧ್ಯಮ ಸ್ವಾತಂತ್ರ್ಯದ ದಮನ ಖಂಡನೀಯ- ಎಸ್ಸೆಸ್ಸೆಫ್

 

 

error: Content is protected !!
Scroll to Top