(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಹೆಣ್ಣೂರು ರಸ್ತೆಯಲ್ಲಿ ನಿರ್ಮಾಣ ಹಂತದ ಪಿಲ್ಲರ್ ಕುಸಿದು ತಾಯಿ ಮಗ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬಿಎಂಆರ್‌ಸಿಎಲ್‌ಗೆ ನೀಡುವುದಾಗಿ ಭಾರತೀಯ ವಿಜ್ಞಾನ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಐಐಎಸ್‌ಸಿ ತಜ್ಞ ಚಂದ್ರಕಿಶನ್, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ. ದುರಂತದ ಹತ್ತು ದಿನಗಳ ಮೊದಲಿನ ದಾಖಲೆಗಳನ್ನು ಪಡೆದಿದ್ದೇವೆ. ಜತೆಗೆ ಪಿಲ್ಲರ್‌ಗೆ ಬಳಸಲಾದ ಕಬ್ಬಿಣ, ಸ್ಟೀಲನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ. ಶೇ.80ರಷ್ಟು ತಾಂತ್ರಿಕ ತನಿಖೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.
ಜತೆಗೆ ಬಲವರ್ಧನೆ ಇಲ್ಲದೆ 18 ಅಡಿ ಎತ್ತರದಷ್ಟು ಕಬ್ಬಿಣ, ಸ್ಟೀಲ್ ಸ್ಟ್ರಕ್ಚರನ್ನು ನಿಲ್ಲಿಸಿದ್ದೇ ಉರುಳಲು ಕಾರಣ ಎಂಬುದು ನಮ್ಮ ಅಭಿಪ್ರಾಯ ಎಂದು ತಿಳಿಸಿದರು. ವರದಿ ಪಡೆದ ಬಳಿಕ ನೀಲಿ ಮಾರ್ಗ ಸಿಲ್ಕ್ ಬೋರ್ಡ್-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಕಾಮಗಾರಿ ಗುತ್ತಿಗೆ ಪಡೆದಿದ್ದ ಎನ್‌ಸಿಸಿ ಹಾಗೂ ಬೇಜವಾಬ್ದಾರಿ ಪ್ರದರ್ಶಿಸಿದ ಅಧಿಕಾರಿಗಳ ವಿರುದ್ಧ ಬಿಎಂಆರ್‌ಸಿಎಲ್ ಯಾವ ಕ್ರಮ ಜರುಗಿಸಲಿದೆ ಎಂಬುದು ಕಾದು ನೋಡಬೇಕಿದೆ.