ಮಂಗಳೂರು: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.

ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

Also Read  ಕರಾವಳಿ ಮುಂದುವರಿದ ಮುಷ್ಕರ ➤ ಬಿಗಡಾಯಿಸಿದ ಕಸದ ಸಮಸ್ಯೆ

 

error: Content is protected !!
Scroll to Top