’ಮಿಸ್‌ ಮಂಗಳೂರು’ ಪಟ್ಟ ಕಾಫಿನಾಡಿನ ಚೆಲುವೆ ಸುಶ್ಮಾ ಎಸ್‌. ಶೆಟ್ಟಿ ಪಾಲು !!

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಪಟ್ಟ ಧರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಹೆವೆನ್ ರೋಜ್ ಆಂಡ್ ಸಿಜ್ಲಿಂಗ್ ಗೈಸ್ ಪ್ರಾಯೋಜಕತ್ವದಲ್ಲಿ ಏರ್ಪಡಿಸಿದ್ದ ಮಿಸ್ ಸ್ಪರ್ದೆಯಲ್ಲಿ ನೂರು ಸ್ಪರ್ಧಾಳುಗಳು ಭಾಗವಹಿಸಿದ್ದರು.

ಅದರಲ್ಲಿ ಅಂತಿಮ ಆಯ್ಕೆ ಸುತ್ತಿಗೆ 36 ಸ್ಪರ್ಧಿಗಳು ಆಯ್ಕೆಯಾದರು. ಅದರಲ್ಲಿ ಕೊನೆಯ ಸುತ್ತಿನ 10 ಮಂದಿಯಲ್ಲಿ ಸುಷ್ಮಾ ಎಸ್. ಶೆಟ್ಟಿ ಅವರು ಆಯ್ಕೆಯಾಗಿ ‘ಮಿಸ್ ಮಂಗಳೂರು’ ಪಟ್ಟವನ್ನು ತೊಟ್ಟರು. ಸುಶ್ಮಾ ಅವರ ತಂದೆ ಬಿ.ಸುರೇಶ್ ಶೆಟ್ಟಿ ಬಣಕಲ್ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷ ಹಾಗೂ ಉತ್ತಮ ಚತುರತೆಯ ವಾಗ್ಮಿ. ಅವರ ತಾಯಿ ಸೌಮ್ಯ ಎಸ್.ಶೆಟ್ಟಿ ಗೃಹಿಣಿಯಾಗಿದ್ದು ಜೆಸಿರೇಟ್ ಸದಸ್ಯರೂ ಆಗಿದ್ದು, ಈ ದಂಪತಿಗಳ ಪುತ್ರಿ ಸುಶ್ಮಾಅವರ ಸಾಧನೆಗೆ ಮನೆಮಾತಾಗಿದ್ದಾರೆ.

Also Read  ಸಂಘಪರಿವಾರದ ಪ್ರಚೋದನೆಯಿಂದ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿಗಳು ➤ ಪೋಷಕರು ಕೂಡಲೇ ಎಚ್ಚೆತ್ತುಕೊಳ್ಳಲಿ- ಪಾಪ್ಯುಲರ್ ಫ್ರಂಟ್

 

error: Content is protected !!
Scroll to Top