ಮಂಗಳೂರು: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು !!                

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಮಂಗಳೂರಿನ ಉಚ್ಚಿಲ ಕಡಲ ತೀರದಲ್ಲಿ ಚೈನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್‌ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನಾದಿಂದ ಲೆಬನಾನ್‌ಗೆ 8 ಸಾವಿರ ಟನ್‌ ತೂಕದ ಸ್ಟೀಲ್‌ ಕಾಯಿಲ್‌ ಸಾಗಿಸುತ್ತಿದ್ದ ಹಡಗು ಇದಾಗಿತ್ತು‌.

ಗುಜರಾತ್‌ ಮೂಲದ ಬನ್ಸಲ್‌ ಎಂಡೆವರ್ಸ್‌ ಸಂಸ್ಥೆಗೆ ತೈಲ ತೆರವು ಗುತ್ತಿಗೆ ನೀಡಲಾಗಿದೆ‌‌. 160 ಟನ್‌ ಫರ್ನೆಸ್‌ ಆಯಿಲ್‌, 60 ಟನ್‌ ಡೀಸೆಲ್‌ ಸೇರಿದಂತೆ 220 ಟನ್‌ ತೈಲ ಇದರಲ್ಲಿದೆ‌. ಹೋಸ್‌ಪೈಪ್‌ ಅಳವಡಿಸಿ ವ್ಯಾಕ್ಯೂಂ ಪಂಪ್‌ ಮೂಲಕ ತೈಲವನ್ನು ಹೊರಕ್ಕೆಳೆಯುವ ಕಾರ್ಯ ಆರಂಭವಾಗಿದೆ.

Also Read  ಚರ್ಮಗಂಟು ರೋಗದಿಂದ 74 ಜಾನುವಾರು ಮೃತ್ಯು

320 ಟನ್‌ ಸಾಮರ್ಥ್ಯದ ಬಂಕರ್‌ ಬಾರ್ಜ್‌ ಮೂಲಕ ತೈಲವನ್ನು ಪೂರ್ಣ ವರ್ಗಾಯಿಸಿ ಹಳೆಬಂದರಿಗೆ ತರಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಯುಎಇಗೆ ಸೇರಿದ ಮೊಂಜಾಸಾ ಡಿಎಂಸಿಸಿ ಎಂಬ ಕಂಪೆನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ತನಗೆ ಶಿಪ್‌ ಬಂಕರಿಂಗ್‌ ಕಾರ್ಯಕ್ಕಾಗಿ ಬರಬೇಕಾದ 1,71,301 ಅಮೆರಿಕನ್‌ ಡಾಲರ್‌ (ಸುಮಾರು 1.39 ಕೋಟಿ ರೂ.) ಮೊತ್ತ ಬಂದಿಲ್ಲ ಎಂದಿತ್ತು. ಅದು ಬರುವವರೆಗೆ ಈ ಹಡಗನ್ನು ತಡೆಹಿಡಿಯುವಂತೆ ಕೋರಿತ್ತು.

Also Read  ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ - ಇಬ್ಬರು ಆರೋಪಿಗಳ ಬಂಧನ

 

error: Content is protected !!
Scroll to Top