ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಸ್ತಿ ವಿವಾದ ➤ ತಂದೆಯಿಂದ ಮಗನ ಮೇಲೆ ಹಲ್ಲೆ..! – News Kadaba

ಆಸ್ತಿ ವಿವಾದ ➤ ತಂದೆಯಿಂದ ಮಗನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com, ಕೊರಟಗೆರೆ,ಜ.19. ಆಸ್ತಿ ವಿಚಾರವಾಗಿ ತಂದೆಯೇ ಮಗನ ತಲೆಗೆ ಬಲವಾಗಿ ಹೊಡೆದ ಪರಿಣಾಮ ಮಗ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ದೊಡ್ಡನರಸಯ್ಯನಪಾಳ್ಯದಲ್ಲಿ ನಡೆದಿದೆ. ಲಕ್ಷ್ಮೀಕಾಂತರಾಜು (45) ತಂದೆಯಿಂದ  ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೃಷ್ಣಪ್ಪ(65)ಹಲ್ಲೆ ಮಾಡಿದ ತಂದೆ. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಅದೇ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ತಂದೆ ಮಗನಿಗೆ ಗುದ್ದಲಿ ಕಾವಿನಿಂದ ತಲೆಗೆ ಹೊಡೆದಿದ್ದಾರೆ. ಬಲವಾಗಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.  ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆರೋಪಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top