ಆರು ವರ್ಷದ ಪ್ರೀತಿಗೆ ಬ್ರೇಕ್ ➤ಪ್ರಿಯತಮ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com. ಉಲ್ಲಾಳ, ಜ. 19. ಆರು ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಪ್ರಿಯತಮ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಲ್ಲಾಳ ಉಪನಗರದಲ್ಲಿ ನಡೆದಿದೆ. ರೋಹಿತ್ 25 ಮೃತ ಯುವಕನಾಗಿದ್ದಾನೆ.

ಈತ ಕೊರಿಯರ್ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ  ಆರು ವರ್ಷಗಳಿಂದ  ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಕೊನೆ ಬಾರಿ ಭೇಟಿಯಾದಾಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವ ಎಂದು ಗಲಾಟೆ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

error: Content is protected !!
Scroll to Top