➤ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದ ಪ್ರಧಾನಿ ಮೋದಿ

ನ್ಯೂಸ್ ಕಡಬ) newskadaba.com. ಕಲಬುರಗಿ, ಜ. 19. ಸೇಡಂ ತಾಲೂಕಿನ ಮಳಖೇಡದಲ್ಲಿ ಪ್ರಧಾನಿಯವರು ಸಾಂಕೇತಿಕವಾಗಿ 5 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದರು.

 

ಕಲಬುರಗಿ, ಬೀದರ್ ರಾಯಚೂರು, ವಿಜಯಪುರ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಐದು ಜಿಲ್ಲೆಗಳ 51, 900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದ್ದು, ಪ್ರಧಾನಿಯವರು ಸಾಂಕೇತಿಕವಾಗಿ ಐವರಿಗೆ ಹಕ್ಕು ಪತ್ರ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಲಂಬಾಣಿ ಭಾಷೆಯಲ್ಲಿ ಭಾಷಣ ಆರಂಭಿಸಿ ಬಂಜಾರ ಸಮುದಾಯ ನನಗೆ ಹೊಸದಲ್ಲ ಇವರು ರಾಷ್ಟ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರವು ದೇಶಾದ್ಯಂತ ಹಳ್ಳಿಗಳಲ್ಲಿರುವ ಗ್ರಾಮೀಣ ಮನೆಗಳಿಗೆ ಹಕ್ಕು ಪತ್ರ ನೀಡುತ್ತಿದೆ. ಈಗ ಬಂಜಾರ್ ಸಮುದಾಯವೂ ಈ ಸೌಲಭ್ಯವನ್ನು ಪಡೆಯುತ್ತಿದೆ ಎಂದು ತಿಳಿಸಿದರು.

Also Read  ಮಂಗಳೂರು: ಇಲೆಕ್ಟ್ರಿಕ್ ರಿಕ್ಷಾಗಳ ಸಂಚಾರಕ್ಕೆ ಅನುಮತಿ - ಆಟೋ ಚಾಲಕರಿಂದ ಪ್ರತಿಭಟನೆ

error: Content is protected !!
Scroll to Top