ನ್ಯೂಸ್ ಕಡಬ) newskadaba.com. ಪುತ್ತೂರು, ಜ. 19. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಜ.18 ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ಪ್ರಾರಂಭಗೊಂಡಿದ್ದು, ಪುತ್ತೂರು, ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಜ. 19ರ ವರೆಗೆ ಬಂದ್ ಮಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಸಿಟಿ ರೈಲ್ವೇ ನಿಲ್ಧಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರೆವಣಿಗೆ ಮತ್ತು ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು. ಪುತ್ತೂರು ಹಾಗೂ ಕಡಬ ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಸುಮಾರು 300ಕ್ಕೂ ಅಧಿಕ ಮಂದಿ ಕಾರ್ಯಕರ್ತೆಯರು ಸಹಾಯಕಿಯರು ಬೆಂಗಳೂರಿನಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.